ಸರ್ವಜ್ಞನ ಬಗ್ಗೆ ಸಂಕ್ಷಿಪ್ತ ಮಾಹಿತಿ.
"ಸರ್ವಜ್ಞ" ಎಂದರೆ ಸಂಸ್ಕೃತದಲ್ಲಿ *ಎಲ್ಲವನ್ನೂ ತಿಳಿದವ ಎಂದರ್ಥ*. ಈತ ಕನ್ನಡದ "ತ್ರಿಪದಿ ಸಾಹಿತ್ಯದ ಪ್ರಮುಖ ಕವಿ". ಪ್ರಮುಖವಾಗಿ ತ್ರಿಪದಿಗಳೆಂಬ ಮೂರು ಸಾಲಿನ ವಚನಗಳನ್ನು ರಚಿಸಿರುವ ಈತನ ಕಾಲದ ಕುರಿತು ಹೆಚ್ಚು ತಿಳಿದಿಲ್ಲ.
"ಜನನ ಮತ್ತು ಬಾಲ್ಯ"
ಸರ್ವಜ್ಞನ ಕಾಲ= *16/17ನೇ ಶತಮಾನ*
ಸರ್ವಜ್ಞ ಜನಿಸಿದ್ದು= *ಇಂದಿನ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕು ಅಬಲೂರ.*
(ಇದು ಈಗ ಸರ್ವಜ್ಞನ ಅಬಲೂರ ಎಂದೇ ಪ್ರಸಿದ್ಧಿ ಪಡೆದಿದೆ.)
ಸರ್ವಜ್ಞನ ಮೂಲ ಹೆಸರು= *ಪುಷ್ಪದತ್ತ*
ತಂದೆ= *ಬಸವರಸ*
ತಾಯಿ= *ಕುಂಬಾರ ಮಾಳೆ,*
ಸಾಕು ತಾಯಿ= *ಮಲ್ಲಕ್ಕ.*
ಕಾವ್ಯನಾಮ= *ಸರ್ವಜ್ಞ*
"ಸರ್ವಜ್ಞ ಜನನದ ಕಥೆ"
ಹಾವೇರಿ ಜಿಲ್ಲೆಯ ಹಿರೇಕೇರೂರು ತಾಲ್ಲೂಕು ಮಾಸೂರಿನಲ್ಲಿ ವಾಸವಾಗಿದ್ದ ಆರಾಧ್ಯ ಬ್ರಾಹ್ಮಣ, "ಬಸವರಸನು", ಎಷ್ಟು ದಿನಗಳಾದರೂ ಮಕ್ಕಳಾಗ ದಿದ್ದಾಗ ಮಲ್ಲಮ್ಮನನ್ನು ಸಮಾಧಾನ ಮಾಡಿ, ಪುತ್ರಸಂತಾನದ ವರ ಪಡೆಯಲು *ಕಾಶೀ ಕ್ಷೇತ್ರಕ್ಕೆ ಹೊರಡುತ್ತಾನೆ.*
"ಭಕ್ತಿಯಿಂದ ಸೇವೆ ಮಾಡಿದ ಬಸವರಸನಿಗೆ ಕಾಶಿ ವಿಶ್ವನಾಥನು ಕನಸಿನಲ್ಲಿ ಪ್ರತ್ಯಕ್ಷನಾಗಿ, 'ನಿನಗೆ ಪುತ್ರಪ್ರಾಪ್ತಿಯಾಗುವುದು. ಹುಟ್ಟುವ ಮಗನು ನನ್ನ ಪ್ರಸಾದದಿಂದ ಮಹಾಜ್ಞಾನಿಯಾಗುವನು' ಎಂದು ಹೇಳಲು ಆನಂದಭರಿತನಾದ ಬಸವರಸನು, ಪ್ರಾತಃಕಾಲದಲ್ಲಿ ಎದ್ದು, ಪವಿತ್ರ ಗಂಗಾಸ್ನಾನ ಮಾಡಿ, ವಿಶ್ವನಾಥನನ್ನು ಅರ್ಚಿಸಿ, ಪ್ರಸಾದಗಳೊಂದಿಗೆ ತನ್ನ ಗ್ರಾಮದ ಹಾದಿ ಹಿಡಿದನು.
ಹಗಲಿರುಳು ಪ್ರಯಾಣ ಮಾಡಿ ಅನೇಕ ಗ್ರಾಮಗಳಲ್ಲಿ ವಿಶ್ರಮಿಸಿ, ದಾರಿಯಲ್ಲಿ ಸಿಕ್ಕ *'ಅಂಬಲೂರ* ಎಂಬ ಗ್ರಾಮಕ್ಕೆ ಬರುವಾಗ ಭಯಂಕರ ಗುಡುಗು, ಸಿಡಿಲುಗಳಿಂದ ಮಳೆ ಸುರಿಯುತ್ತಿತ್ತು. ಸಮೀಪದಲ್ಲಿದ್ದ ಕುಂಬಾರಸಾಲೆಯಲ್ಲಿ *ಕುಂಬಾರ ಮಾಳಿ* ಎಂಬುವಳ ಮನೆಯಲ್ಲಿ ವಸತಿ ಮಾಡಿದನು. ಕಾಲಧರ್ಮ ಸಂಯೋಗದಿಂದ ಮಾಳಿಯಲ್ಲಿ ವ್ಯಾಮೋಹಗೊಂಡ ಬಸವರಸನಿಗೆ ಕಾಮ ವಿಕಾರವಾಯಿತು.
ಕಾಶಿಯಿಂದ ತಂದ ತೀರ್ಥ ಪ್ರಸಾದಗಳನ್ನು ಕೊಟ್ಟು ಅವಳ ಸಂಗ ಮಾಡಿದನು. ೯ ತಿಂಗಳ ನಂತರ ಮಾಳಿ ದಿವ್ಯ ತೇಜಸ್ಸಿನ ಗಂಡು ಕೂಸಿಗೆ ಜನ್ಮವಿತ್ತಳು. *'ಪುಷ್ಪದತ್ತ*'ನೆಂದು ನಾಮಕರಣವೂ ಆಯಿತು. ಮುಂದೆ ಈ ಮಗುವೇ ಜಗತ್ತಿಗೆ ಸರ್ವಜ್ಞನೆಂದು ಪ್ರಸಿದ್ಧಿಯಾದನು. ಬಾಲ್ಯದಲ್ಲಿಯೆ ಅಗಾಧವಾದ ಪಾಂಡಿತ್ಯವನ್ನು ಶಿವನ ವರಪ್ರಸಾದದಿಂದ ಪಡೆದಿದ್ದನು.
ತಂದೆ ತಾಯಿಗಳಿಂದ ಅಗಲಿ ಪುಣ್ಯಕ್ಷೇತ್ರಗಳನ್ನೂ ಗುರುಮಠಗಳನ್ನೂ ಭೇಟಿ ಮಾಡಿ ಜ್ಞಾನಾರ್ಜನೆ ಮಾಡಿದನು. ಎಲ್ಲಾ ಶಾಸ್ತ್ರಗಳ ಜ್ಞಾನವನ್ನು ಸಂಪಾದಿಸಿದನು. ಅವನ ಜನಪ್ರಿಯ ವಚನಗಳು ಅವನ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಒದಗಿಸಿವೆ. ಅವನು ರಚಿಸಿದ ತ್ರಿಪದಿಗಳಿಗೆ ಲೆಕ್ಕವಿಲ್ಲ. ಅವನು ಆಶುಕವಿಯಾದ್ದರಿಂದ, ಎಷ್ಟೋ ಕವನಗಳು ಅವನ ಸ್ಮೃತಿಯಲ್ಲೇ ಉಳಿದಿರಬಹುದು. ಸುಮಾರು *7070 ವಚನಗಳು ಲಭ್ಯವಾಗಿದೆಯೆಂದು ತಜ್ಞರ ಅಭಿಪ್ರಾಯ.*
*ಸರ್ವಜ್ಞ* - "ತನ್ನ ಬಗೆಗೆ ಹೇಳಿರುವ ತ್ರಿಪದಿಗಳು"
1). "ಮುನ್ನ ಪೂರ್ವದಲಾನು ಪನ್ನಗಧರನಾಳು
ಎನ್ನಯ ಪೆಸರು ಪುಷ್ಪದತ್ತನು-ಎಂದು
ಮನ್ನಿಪರು ನೋಡ ಸರ್ವಜ್ಞ".
2). "ಅಂದಿನಾ ಪುಷ್ಪದತ್ತ ಬಂದ ವರರುಚಿಯಾಗಿ."
"ಮುಂ ದೇವಸಾಲೆ ಸರ್ವಜ್ಞ – ನೆಂದೆನಿಸಿ."
"ನಿಂದವನು ತಾನೇ ಸರ್ವಜ್ಞ"
3). "ಮಕ್ಕಳಿಲ್ಲವು ಎಂದು ಅಕ್ಕಮಲ್ಲಮ್ಮನು."
"ದುಕ್ಕದಿ ಬಸವ ಗರಿಪಲ್ಲವ - ಕಾಶಿಯ."
"ಮುಕ್ಕಣ್ಣಗೆ ಹೋದ ಸರ್ವಜ್ಞ"
4). "ಮಾಸನೂರ ಬಸವರಸ ಕೊಸನಿಶನ ಕೇಳಲು"
"ಕಾಶಿಯೀಶನೊಳು ಪಡೆದ ವರ - ವಧು ನಡುವೆ"
"ಸೂಸಿತೆಂತಲು ಸರ್ವಜ್ಞ"
5). "ಗಂಡಾಗಬೇಕೆಂದು ಪಿ0ಡವ ನುಂಗಲು"
"ಲಂಡೆ ಮಾಳ್ವೆಯೊಳು ಜನಿಸಿ - ಲೋಕದೊಳು"
"ಕಂಡುದನೆ ಪೇಳ್ವೆ ಸರ್ವಜ್ಞ"
*ಸರ್ವಜ್ಞನ ತ್ರಿಪದಿಗಳ* ಕೆಲವು ಉದಾಹರಣೆಗಳು:
1) ಮಾಸೂರ ಬಸವರಸ । ಕೂಸನೀಶನ ಕೇಳೆ।
ಕಾಶಿಯ ಅಭವನೊಳು । ಪಡೆದ ವರವದುವೇ ।
ಸೂಸಿತೆಂತೆನಲು ಸರ್ವಜ್ಞ ॥
2)"ಸರ್ವಜ್ಞನೆಂಬುವನು ಗರ್ವದಿಂದಾದವನೇ?
ಸರ್ವರೊಳು ಒಂದೊಂದು ನುಡಿಗಲಿತು
ವಿದ್ಯೆಯ ಪರ್ವತವೆ ಆದ ಸರ್ವಜ್ಞ."
3)"ಮೂರ್ಖಂಗೆ ಬುದ್ಧಿಯನು ನೂರ್ಕಾಲ ಹೇಳಿದರು
ಗೋರ್ಕಲ್ಲಮೇಲೆ ಮಳೆಗರೆದರೆ
ಆಕಲ್ಲು ನೀರುಕುಡಿವುದೆ ಸರ್ವಜ್ಞ"?
4)"ಸಾಲವನು ಕೊಂಬಾಗ ಹಾಲೋಗರುಂಡಂತೆ
ಸಾಲಿಗರು ಕೊಂಡು ಎಳೆವಾಗ
ಕಿಬ್ಬಡಿಯ ಕೀಲು ಮುರಿದಂತೆ ಸರ್ವಜ್ಞ."
5)"ಏಳು ಕೋಟಿಯೆ ಕೋಟಿ, ಏಳು ಲಕ್ಷವೇ ಲಕ್ಷ
ಏಳು ಸಾವಿರದ ಎಪ್ಪತ್ತು ವಚನಗಳ
ಹೇಳಿದನು ಕೇಳ ಸರ್ವಜ್ಞ."
6)"ಬೆಚ್ಚನೆಯ ಮನೆಯಾಗೆ ವೆಚ್ಚಕ್ಕೆ ಹೊನ್ನಾಗೆ
ಇಚ್ಛೆಯನರಿವ ಸತಿಯಾಗೆ ಸ್ವರ್ಗಕ್ಕೆ
ಕಿಚ್ಚು ಹಚ್ಚೆಂದ ಸರ್ವಜ್ಞ"
7) *ಕೊಟ್ಟಿದ್ದು ತನಗೆ ಬಚ್ಚಿಟ್ಟಿದ್ದು ಪರರಿಗೆ ಕೊಟ್ಟದಕ್ಕೆ ಬೇಡ ಮುಂದೆ ಕಟ್ಟಿಟ್ಟ ಬುತ್ತಿ ಸರ್ವಜ್ಞ,*
No comments:
Post a Comment