ಹುಬ್ಬಳ್ಳಿಯಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್, ಶೀಘ್ರದಲ್ಲೇ ಪ್ರಧಾನಿಯಿಂದ ಲೋಕಾರ್ಪಣೆ
ಹುಬ್ಬಳ್ಳಿಯ ಶ್ರೀ ಸಿದ್ಧರೂಧ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ನಿರ್ಮಾಣವು ಅಂತಿಮ ಹಂತ ತಲುಪಿದ್ದು, ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.
ನಿರ್ಮಾಣ ಹಂತದ ಅಂತಿಮ ಹಂತದಲ್ಲಿರುವ ಪ್ಲಾಟ್‌ಫಾರ್ಮ್ ನಂಬರ್ 1 ಒಟ್ಟು 1,505 ಮೀಟರ್ ಉದ್ದವಿದ್ದು, ಇದು ಈಶಾನ್ಯ ರೈಲ್ವೆ ವಲಯದ ಗೋರಖ್‌ಪುರ ನಿಲ್ದಾಣದ 1,366 ಮೀಟರ್ ಉದ್ದದ ಪ್ಲಾಟ್‌ಫಾರ್ಮ್ ಗಿಂತ ಉದ್ದವಿದೆ.
ಈಗಿರುವ 550 ಮೀಟರ್ ಪ್ಲಾಟ್‌ಫಾರ್ಮ್ ಅನ್ನು 10 ಮೀಟರ್ ಅಗಲದೊಂದಿಗೆ 1,505 ಮೀಟರ್‌ಗೆ ವಿಸ್ತರಿಸಲಾಗಿದೆ. ಒಂದೇ ಸಮಯದಲ್ಲಿ ಎರಡು ರೈಲುಗಳಿಗೆ ಅನುಕೂಲವಾಗುವಂತೆ ಈ ಪ್ಲಾಟ್‌ಫಾರ್ಮ್ ಅನ್ನು ವಿನ್ಯಾಸಗೊಳಿಸಲಾಗಿದೆ
No comments:
Post a Comment