(1857)
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು. ಇವರ ಆಡಳಿತದ ಬಗ್ಗೆಯೂ ಕೂಡಾ ಜನರಲ್ಲಿ ಅಸಮಾಧಾನವಿತ್ತು. ಈ ಅಸಮಾಧಾನವು 1857ರಲ್ಲಿ ಮಹಾಪ್ರತಿಭಟನೆಯ ರೂಪದಲ್ಲಿ ಸ್ಫೋಟಿಸಿತ್ತು. ಇದನ್ನು ಕೆಲವು ಭಾರತೀಯ ಇತಿಹಾಸಕಾರರು ‘ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ’ ಎಂದು ಕರೆದರೆ, ಇಂಗ್ಲಿಷ್ ಇತಿಹಾಸಕಾರರು ಇದೊಂದು ‘ಸಿಪಾಯಿ ದಂಗೆ’ ಮಾತ್ರ ಎಂದಿದ್ದಾರೆ.
ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಾರಣಗಳು :
ರಾಜಕೀಯ ಕಾರಣಗಳು :
ಬ್ರಿಟಿಷರು ಜಾರಿಗೆ ತಂದಿದ್ದ ‘ದತ್ತು ಮಕ್ಕಳಿಗೆ ಹಕ್ಕಿಲ್ಲ’ ಎಂಬ ನೀತಿಯಿಂದಾಗಿ ಹಲವು ದೇಶೀ ಸಂಸ್ಥಾನಗಳು ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳಬೇಕಾಯಿತು.
ಈ ನೀತಿಯಿಂದಾಗಿ ಸತಾರ, ಜೈಪುರ, ಝಾನ್ಸಿ, ಉದಯಪುರ ಮೊದಲಾದ ಸಂಸ್ಥಾನಗಳು ಬ್ರಿಟಿಷರ ವಶವಾದವು.
ಡಾಲ್ಹೌಸಿಯು ತಂಜಾವೂರು ಮತ್ತು ಕರ್ನಾಟಿಕ್ ನವಾಬರಿಗಿದ್ದರಾಜ ಪದವಿಗಳನ್ನು ರದ್ದುಪಡಿಸಿದನು. ಮೊಘಲ್ ಚಕ್ರವರ್ತಿ, ಔದ್ನ ನವಾಬ ಮೊದಲಾದ ರಾಜರುಗಳನ್ನು ಇಂಗ್ಲಿಷರು ಅಧಿಕಾರದಿಂದ ಪದಚ್ಯುತಗೊಳಿಸಿದರು.
ಪರಿಣಾಮವಾಗಿ ಇವರನ್ನು ಅವಲಂಬಿಸಿದ ಲಕ್ಷಾಂತರ ಸೈನಿಕರು ನಿರುದ್ಯೋಗಿಗಳಾದರು. ಇದು ಬ್ರಿಟಿಷರ ವಿರುದ್ಧದ 1857ರ ಪ್ರತಿಭಟನೆಗೆ ಪ್ರೇರಕವಾಯಿತು.
ಆರ್ಥಿಕ ಕಾರಣಗಳು :
ಇಂಗ್ಲೆಂಡಿನಲ್ಲಾದ ಕೈಗಾರಿಕಾ ಕ್ರಾಂತಿಯ ಪರಿಣಾಮವಾಗಿ ಕರಕುಶಲತೆ ಮತ್ತು ದೇಶೀಯ ಕೈಗಾರಿಕೆಗಳು ಕ್ಷೀಣಿಸಿದವು.
ಇಂಗ್ಲೆಂಡ್ ವ್ಯಾಪಾರಿ ರಾಷ್ಟ್ರವಾಗಿರದೆ ಕೈಗಾರಿಕೆಗಳ ಕಾರ್ಯಾಗಾರವಾಯಿತು. ಭಾರತದಲ್ಲಿದ್ದಂತಹ ಕರಕುಶಲಗಾರರು ನಿರುದ್ಯೋಗಿಗಳಾದರು.
ವಿಶೇಷವಾಗಿ ಬಟ್ಟೆ ಮತ್ತು ಉಣ್ಣೆ ಕೈಗಾರಿಕೆಗಳು ಅವನತಿ ಹೊಂದಿ ನೇಕಾರಿಕೆ ವೃತ್ತಿಯವರು ಉದ್ಯೋಗ ಕಳೆದುಕೊಂಡರು.
ಗೃಹಕೈಗಾರಿಕೆಗಳು ಇದೇ ಬಗೆಯ ತೀವ್ರ ಆರ್ಥಿಕನಷ್ಟ ಅನುಭವಿಸಿ ಶಿಥಿಲಗೊಂಡವು.
ಭಾರತದ ವಸ್ತುಗಳನ್ನು ಇಂಗ್ಲೆಂಡಿನಲ್ಲಿ ಮಾರಲು ಇಂಗ್ಲಿಷರು ದುಬಾರಿ ಸುಂಕವನ್ನು ಹೇರಿದರು. ಜಮೀನ್ದಾರಿ ಪದ್ಧತಿಯಿಂದಾಗಿ ಸರ್?
No comments:
Post a Comment